ಕ್ವಾರಿ ಮತ್ತು ಕ್ರಷರ್ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, ಬಹು ರಾಷ್ಟ್ರೀಯ ಕಂಪೆನಿಗಳಿಗೆ ಅನುಕೂಲ ಮಾಡಿಕೊಡಲು ರಾಜ್ಯದ ಕಲ್ಲು ಗಣಿ ಉದ್ದಿಮೆದಾರರನ್ನು ಕಡೆಗಣಿಸುತ್ತಿದೆ. ಹತ್ತು ದಿನಗಳಿಂದ ಕಲ್ಲು ಗಣಿಗಾರಿಕೆಯನ್ನು ಬಂದ್ ಮಾಡಿ ನಡೆಸುತ್ತಿರುವ ಹೋರಾಟಕ್ಕೆ ಮನ್ನಣೆ ನೀಡುತ್ತಿಲ್ಲ. ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಜ.8 ರಂದು ಬೆಂಗಳೂರು ಚಲೋ ಬೃಹತ್ ಹೋರಾಟ ಹಮ್ಮಿಕೊಳ್ಳುವುದಾಗಿ ಬೆಂಗಳೂರು ನಗರ ಜಿಲ್ಲಾ ಸ್ಟೋನ್ ಕ್ರಷರ್ಸ್ ಅಂಡ್ ಕ್ವಾರಿ ಓನರ್ಸ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.