ಬೆಂಗಳೂರು: ಮಠ ಹಾಗೂ ಮಠದ ವ್ಯಾಪ್ತಿಯಲ್ಲಿರುವ ದೇವಾಲಯಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಹೊರಟಿದ್ದ ರಾಜ್ಯ ಸರ್ಕಾರ ತೀವ್ರ ವಿರೋಧದ ಹಿನ್ನಲೆಯಲ್ಲಿ ಸುತ್ತೋಲೆ ವಾಪಸ್ ಪಡೆದಿದೆ. ಈ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದ್ದಂತೆ ಭಾರೀ ವಿರೋಧ ವ್ಯಕ್ತವಾಗಿತ್ತು. ಚುನಾವಣೆ ಸಂದರ್ಭದಲ್ಲಿ ಇಂತಹದ್ದೊಂದು ಎಡವಟ್ಟು ಮಾಡಿಕೊಂಡು ಸರ್ಕಾರ ಹಿಂದೂ ಸಮುದಾಯದ ವಿರೋಧ ಕಟ್ಟಿಕೊಳ್ಳಲು ಹೊರಟಿತ್ತು. ಅದಕ್ಕೀಗ ಬ್ರೇಕ್ ಬಿದ್ದಿದೆ.ಮೂಲಗಳ ಪ್ರಕಾರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಕೆಲವು ಸ್ವಾಮೀಜಿಗಳು