ಮಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ ಅಳಿಯ ಕಾಫಿ ಡೇ ಮಾಲೀಕ ವಿ.ಜಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾರ್ಥ್ ಪತ್ತೆಗಾಗಿ ರಾಜ್ಯ ಸಂಸದರು ಕೇಂದ್ರ ಸರ್ಕಾರದ ನೆರವು ಕೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ನಳಿನ್ ಕುಮಾರ್ ಕಟೀಲು ಭಗವಂತ ಖೂಬಾ, ಸಂಗಣ್ಣ ಕರಡಿ, ಗದ್ದಿಗೌಡರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಸಿದ್ದಾರ್ಥ್ ಪತ್ತೆಗಾಗಿ ನೆರವು ನೀಡುವಂತೆ ಮನವಿ ಮಾಡಿದ್ದಾರೆ