ರಾಜ್ಯದಲ್ಲಿನ ಜೆಸಿಬಿ ಪಕ್ಷಗಳು ಲೂಟಿಕೋರ ಪಕ್ಷಗಳಾಗಿದ್ದು, ರಾಜ್ಯವನ್ನು ಲೂಟಿ ಹೊಡೆದಿವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿಯವರು ಭ್ರಷ್ಟಚಾರ ಮೈಗೂಡಿಸಿಕೊಂಡು ಸ್ವತಂತ್ರ ಭಾರತದ ಕನಸನ್ನು ಹಾಳು ಮಾಡಿದ್ದಾರೆ ಎಂದು ದೂರಿದ್ದಾರೆ. ಜೆಡಿಎಸ್ ಪಕ್ಷ ರಾಜ್ಯಸಭೆ ಸ್ಥಾನಗಳನ್ನು ಹರಾಜಿಗಿಟ್ಟು ರಾಜ್ಯವನ್ನು ಹಾಳು ಮಾಡಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸೋತಿದ್ದಾರೆ ಎಂದು ಟೀಕಿಸಿದ್ದಾರೆ. ಬ್ಯಾಂಕುಗಳು ದಿವಾಳಿಯಾದರೂ ಪ್ರಧಾನಮಂತ್ರಿ ನರೇಂದ್ರ ಮೋದಿ