ಮೇ 18 ರಿಂದ ಪಕ್ಷ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಹಮ್ಮಿಕೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕಾಂಗ್ರೆಸ್ ಸರಕಾರದ ಬಗ್ಗೆ ಜನತೆ ಬೇಸತ್ತಿದ್ದಾರೆ. ಬರಗಾಲದಿಂದ ರೈತರು, ಜನಸಾಮಾನ್ಯರು ಕಂಗಾಲಾಗಿದ್ದರೂ ಸರಕಾರ ಅವರ ನೆರವಿಗೆ ಬರುತ್ತಿಲ್ಲ ಎಂದು ಆರೋಪಿಸಿದರು. ರೈತರು ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲ ಮನ್ನಾ ಖಚಿತ ಎಂದು ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ನಾಯಕರು ಸರ್ವೇ