ಬೆಂಗಳೂರು : ಡಿ.ಕೆ.ಶಿವಕುಮಾರ್ ಕುರಿತು ಕಾಂಗ್ರೆಸ್ ಪಕ್ಷದ ನಾಯಕರು ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಬಾರದಿತ್ತು ಎಂದು ಹೇಳಿದ್ದಾರೆ. Photo Courtesy: Google ಡಿಕೆಶಿ ಪರ ಮೃಧು ಧೋರಣೆಯಲ್ಲಿ ಮಾತನಾಡಿರುವ ಅವರು, ಡಿಕೆಶಿ ಭ್ರಷ್ಟಾಚಾರ ಮಾಡಿದ್ದಾರೋ, ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಿದ್ದು ತಪ್ಪು. ಯಾವುದೇ ವೇದಿಕೆಗಳಲ್ಲಿ ಮಾತಾಡುವಾಗ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.