ಬೆಂಗಳೂರು (ಜುಲೈ 09); ಕೊರೋನಾ ಕಾರಣಕ್ಕೆ ಮಕ್ಕಳ ರಕ್ಷಣೆಗೆ ಒತ್ತು ನೀಡಿ ಅನೇಕ ರಾಜ್ಯಗಳಲ್ಲಿ SSLC ಮತ್ತು PUC ಪರೀಕ್ಷೆಗಳನ್ನು ನಡೆಸದೆ ಎಲ್ಲಾ ವಿದ್ಯಾರ್ಥಿಗಳನ್ನೂ ಪಾಸ್ ಮಾಡಲಾಗಿದೆ. ಮುಂದಿನ ತರಗತಿಗಳಿಗೆ ಕಳುಹಿಸಲಾಗಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ರಾಜ್ಯ ಸರ್ಕಾರ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಪಾಸು ಮಾಡುವ ನಿರ್ಧಾರಕ್ಕೆ ಮುಂದಾಗಿದೆ. ಆದರೆ, 10ನೇ ತರಗತಿಗೆ ಮಾತ್ರ ಪರೀಕ್ಷೆ ಕಡ್ಡಾಯವಾಗಿ ನಡೆಸಲಾಗುವುದು ಎಂದು ತಿಳಿಸಿದೆ. ಸರ್ಕಾರದ ಈ ನಿರ್ಧಾರ ವಿದ್ಯಾರ್ಥಿಗಳ ಯೋಗಕ್ಷೇಮದ ದೃಷ್ಟಿಯಿಂದ ಸರಿಯಲ್ಲ ಎಂದು ಅನೇಕರು ಕಿಡಿಕಾರಿದ್ದಾರೆ. ಅಲ್ಲದೆ, ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಪಾಸು ಮಾಡುವಂತೆ ಒತ್ತಾಯಿಸಿದ್ದಾರೆ. ಆದರೆ, ಈ ಬಗ್ಗೆ ಕೊನೆಗೂ ಮೌನ ಮುರಿದಿರುವ ಸಚಿವ ಸುರೇಶ್ ಕುಮಾರ್, ನಾವು ಹಠಕ್ಕಾಗಿ ಪರೀಕ್ಷೆ ನಡೆಸುತ್ತಿಲ್ಲ ಎಂದು ತಿಳಿಸಿದ್ದಾರೆ.