ಬೆಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಸಂವಿಧಾನದ ಆಶಯ ಎತ್ತಿಹಿಡಿದಿದೆ. ಇದರಿಂದ ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು, ಇದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರಿಂದು ಲಾಲ್ ಬಾಗ್ ನಲ್ಲಿ ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶಿಕ್ಷೆಯನ್ನ ವಿಧಿಸಿ ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು.ಆ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ