Karnataka Weather Update: ಮುಂಗಾರು ಮಳೆ ಅಂದುಕೊಂಡದ್ದಕ್ಕಿಂತ ತುಸು ತಡವಾಗೇ ಬಂದರೂ ಎಲ್ಲೆಡೆ ಉತ್ತಮವಾಗೇ ಇದೆ. ಕಳೆದ ವರ್ಷಗಳಿಗೆ ಹೋಲಿಸಿದ್ರೆ ಕರ್ನಾಟಕ ರಾಜ್ಯದಲ್ಲಿ ಮಳೆಯಿಂದ ಭಾರೀ ಪ್ರಾಣಹಾನಿಯಾಗಿಲ್ಲ. ಆದರೆ ಮಳೆಗಾಲ ಇನ್ನೂ ಸಾಕಷ್ಟು ಸಮಯ ಇರುವುದರಿಂದ ಎಲ್ಲರೂ ಎಚ್ಚರಿಕೆಯಿಂದಲೇ ಇರಬೇಕಾಗಿದೆ. ನಿನ್ನೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ನಿರಂತರ ಮಳೆಯಾಗಿದೆ. ಮುಖ್ಯವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅತೀ