ಮೋದಿ ಸಾಕ್ಷ್ಯಚಿತ್ರ ವೀಕ್ಷಿಸುತ್ತಿದ್ದ ಜೆಎನ್ಯು ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟದ ಆರೋಪಗಳು ಕೇಳಿ ಬಂದಿವೆ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಾಚಿತ್ರವನ್ನು ಪ್ರದರ್ಶಿಸುವ ಕೆಲವು ವಿದ್ಯಾರ್ಥಿಗಳ ಯೋಜನೆ ವಿಫಲವಾಗಿದೆ. ಸಾಕ್ಷ್ಯಚಿತ್ರ ವೀಕ್ಷಿಸದಂತೆ ತಡೆಯಲು ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿತ್ತು ಜೊತೆಗೆ ಫೋನ್ಗಳಲ್ಲಿ ಸಾಕ್ಷ್ಯಚಿತ್ರ ನೋಡುತ್ತಿದ್ದವರ ಮೇಲೆ ಎಬಿವಿಪಿಯವರು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಎಡಪಂಥೀಯ ಬೆಂಬಲಿಗರು ಇಬ್ಬರು ವಿದ್ಯಾರ್ಥಿಗಳನ್ನು ಹಿಡಿದಿದ್ದು ಅವರು