ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿಯೊಂದು ಕುಸಿದು ಬಿದ್ದ ಪರಿಣಾಮ ಹಲವು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು. ಬಳಿಕ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ, ಮಂಗಳವಾರ ಬಿಹಾರದ 8 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನೂ 4 ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸೋಮವಾರ ಮಿಜೋರಾಂನ ಹ್ನಾಥಿಯಾಲ್ ಗ್ರಾಮದ ಬಳಿ ಇದ್ದ ಕಲ್ಲು ಕ್ವಾರಿ ಕುಸಿದು ಬಿದ್ದಿದೆ. ಇದರ ಪರಿಣಾಮ 12 ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಗುರುತು