ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಎರಡನೆಯ ದಿನಕ್ಕೂ ಮುಂದುವರೆದಿದೆ. ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಚಾಮರಾಜನಗರದ ಡಿಪೋದಿಂದ ಹೊರಡಬೇಕಿದ್ದ 490 ಬಸ್ಗಳು ನಿಂತಲ್ಲೇ ನಿಂತಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಮುಂಚಾಗ್ರತಾ ಕ್ರಮವಾಗಿ ಇಂದು ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಷ್ಕರವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಹಾಗೂ ಆಟೋ ಚಾಲಕರು ಪ್ರಯಾಣಿಕರಿಂದ ಹೆಚ್ಚು ಹಣ ಸುಲಿಗೆ ಮಾಡುತ್ತಿವೆ ಎಂದು ಸಾರ್ವಜನಿಕರು