ಧಾರವಾಡ : ಮಠ-ಮಂದಿರಗಳಿಗೆ ದುಡ್ಡು ಕೊಡುವುದನ್ನು ನಿಲ್ಲಿಸಿ, ಹಿಂದೂ ಸಂಘಟನೆಗಳಿಗೆ ಕೊಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮನವಿ ಮಾಡಿದರು.ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅವರು, ಮಠ ಮಂದಿರ ಬಿಟ್ಟು ಹಿಂದೂ ಸಂಘಟನೆಗಳಿಗೆ ಹಣ ಕೊಡಿ. ಹಿಂದೂ ಸಂಘಟನೆಗಳಿಗೆ ಬಲ ಕೊಡಿ. ಆಗ ನಿಮಗೆ ನಾವು ಹಿಂದೂ ರಾಷ್ಟ್ರ ಮಾಡಿ ತೋರಿಸುತ್ತೇವೆ ಎಂದು ಹೇಳಿದರು.ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಗೋ ಮಾತೆ, ಮಾತೆ