ಆನೇಕಲ್: ಜನರನ್ನು ಇನ್ನಿಲ್ಲದೆ ಕಾಡುತ್ತಿದ್ದ ಕೊರೊನಾ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಆದ್ರೆ ಇಲ್ಲೊಂದು ಗ್ರಾಮದ ಜನರು ಕೊರೊನಾಗಿಂತ ಹೆಚ್ಚಾಗಿ ಮೂಲಭೂತ ಸೌಕರ್ಯದ ಕೊರತೆ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. ಸಮರ್ಪಕ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ಜನ ಸರಿಯಾದ ಸವಲತ್ತುಗಳಿಗಾಗಿ ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ. ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ಹುಲ್ಲುಹಳ್ಳಿ ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಗೆ ಅಗುದಿ ದೂರದಲ್ಲೇ ಇದೆ. ಬೆಂಗಳೂರು ಹೊರವಲಯ ಬೆಂಗಳೂರು ದಕ್ಷಿಣ ತಾಲ್ಲೂಕಿಗೆ ಸೇರುವ ಹುಲ್ಲುಹಳ್ಳಿ ಗ್ರಾಮದ ರಸ್ತೆಗಳಲ್ಲಿ ಗಿಂಡಗಂಟಿಗಳೇ