ಬೀದರ್ : ಮನೆಯ ಮುಂದಿನ ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಗಾಡಿವಾನ ಓಣಿಯಲ್ಲಿ ನಡೆದಿದೆ.