ಬೆಂಗಳೂರು:ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಶನಿವಾರ (ಜ.13) ನಡೆಯಲಿದ್ದು, ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿವಿಧ ರೀತಿಯ 41 ವಿಷಯಗಳಿಗೆ (Subjects) ಪರೀಕ್ಷೆ ನಡೆಯುತ್ತಿದ್ದು ಒಟ್ಟು 1,17,302 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.