ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಖಾಸಗಿ ವಿಮಾನ ನಿಲ್ದಾಣಕ್ಕೆ ರಾಯಚೂರು ಜಿಲ್ಲೆಗೆ ತೆರಳುವ ಸಲುವಾಗಿ ವಿಶೇಷ ವಿಮಾನ ಮೂಲಕ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನೀರು ಪೂರೈಕೆಗೆ ಸೂಚನೆ: ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಎದುರಿಸಲು ನಮ್ಮ ಸರ್ಕಾರ ಸಜ್ಜಾಗಿದೆ. ಈಗಾಗಲೆ ಜಾನುವಾರುಗಳಿಗೆ ಮೇವು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಮೇವು