ಮೊರಾಕ್ಕೋದ ಮರಕೇಶ್ನ ನೈಋತ್ಯ ಭಾಗದಲ್ಲಿ ನಿನ್ನೆ ತಡರಾತ್ರಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮರಕೇಶ್ನ ನೈಋತ್ಯಕ್ಕೆ 44 ಮೈಲಿ ಅಂದ್ರೆ 71 ಕಿಲೋಮೀಟರ್ ದೂರದಲ್ಲಿ ರಾತ್ರಿ 11:11 ಕ್ಕೆ 18.5 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಘಟನೆಯಲ್ಲಿ 296 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿವೆ.ರಾಜಧಾನಿ ರಬಾತ್ನಿಂದ ದಕ್ಷಿಣಕ್ಕೆ 320 ಕಿಲೋಮೀಟರ್ ದೂರದಲ್ಲಿರುವ ಪ್ರವಾಸಿ ನಗರ ಮರ್ರಾಕೆಚ್ ಪ್ರದೇಶದಲ್ಲಿ 27 ಜನರು