ಬೆಂಗಳೂರು : ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಜ್ವಲ್, ಅನಿಲ್ ಕುಮಾರ್, ದೀಪು ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿ ಅಭಿಷೇಕ್ನನ್ನು ಆರೋಪಿಗಳು ಅಪಹರಿಸಿದ್ದರು. ಅಭಿಷೇಕ್ ಸ್ನೇಹಿತರೇ ಅಪಹರಣಕ್ಕೆ ಪ್ಲ್ಯಾನ್ ಮಾಡಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಅಭಿಷೇಕ್ ಅಪಹರಿಸಿ ಕರೆದೊಯ್ದಿದ್ದರು. ಬಳಿಕ ಆತನನ್ನು ದೇವನಹಳ್ಳಿಗೆ ಕರೆದೊಯ್ದಿದ್ದ ಆರೋಪಿಗಳು, ಅಭಿಷೇಕ್ ತಂದೆಗೆ ಕರೆ