ವ್ಯಾಟ್ಯಪ್ ಗೆ ತನ್ನ ಫೋಟೋ ಕಳಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಕಾಲೇಜಿನ ಕಾರ್ಯದರ್ಶಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಲ್ಲದೆ ಶಾಲೆಯ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ವಿಶ್ವ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಯಶಸ್ವಿ, ಅದೇ ಕಾಲೇಜಿನಲ್ಲಿ ಹತ್ತನೆ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಪ್ರತಿ ನಿತ್ಯ ಪೋಟೋ ಕಳಿಸುವಂತೆ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ವಿದ್ಯಾರ್ಥಿನಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಕಾಲೇಜಿಗೆ ಆಗಮಿಸಿದ