ಶಾಲಾ-ಕಾಲೇಜು ವಿದ್ಯಾರ್ಥಿಗಳು ಯಾವುದೇ ರೀತಿಯ ಸಂಘಟನೆಯಲ್ಲಿ ಗುರುತಿಸಿಕೊಳ್ಳದಂತೆ ಸುತ್ತೋಲೆ ಹೊರಡಿಸಲು ಶಿಕ್ಷಣ ಸಚಿವ ತನ್ವೀರ್ ಸೇಠ್ ಮುಂದಾಗಿದ್ದಾರೆ. ವಿದ್ಯಾರ್ಥಿಗಳನ್ನ ಸಂಘಟನೆಗಳು ಬೇರೆ ಬೇರೆ ಸಂಘಟನೆಗಳು ಬಳಸಿಕೊಳ್ಳುತ್ತಿವೆ. ರಾಜಕೀಯವಾಗಿಯೂ ಬಳಸಿಕೊಳ್ಳುತ್ತಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳ ಹಿತಾದೃಷ್ಟಿಯಿಂದ ವಿದ್ಯಾರ್ಥಿಗಳು ಯಾವುದೇ ಸಂಘಟನೆಯಲ್ಲಿ ಭಾಗವಹಿಸದಂತೆ ಸುತ್ತೋಲೆ ಹೊರಡಿಸಲು ನಿರ್ಧರಿಸಲು ನಿರ್ಧರಿಸಲಾಗಿದೆ. ಪ್ರತಿಭಟನೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಶಾಲೆಯ ವಿದ್ಯಾರ್ಥಿಗಳನ್ನ ಹೊರಕರುತ್ತಿರುವ ಬಗ್ಗೆ ದೂರುಗಳು ಬಂದಿವೆ. ಶಾಲೆ ಸೂಕ್ಷ್ಮ ಪ್ರದೇಶ, ಅಲ್ಲಿ ಶೈಕ್ಷಣಿಕ ಚಟುವಟಿಕೆ ಮಾತ್ರ ನಡೆಯಬೇಕು.