ಬಸ್ಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಿರ್ಮಾಣವಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಬಸ್ಗಳ ಕೊರತೆ ಹೆಚ್ಚಾಗುತ್ತಿದೆ. ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗಲು ಸಾಧ್ಯವಾಗದೇ ಪರದಾಡುವಂತಾಗಿದೆ.. ಬೆಳಿಗ್ಗೆ 6 ಗಂಟೆಯಿಂದಲೂ ಗಂಗಾವತಿಯಲ್ಲಿರುವ ಕಾಲೇಜಿಗೆ ಹೋಗಬೇಕಾದ ವಿದ್ಯಾರ್ಥಿಗಳು ಬಸ್ಗಾಗಿ ಕಾದು ಕಾದು ಸುಸ್ತಾಗಿ ದಿಢೀರ್ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ರು. ದಿನನಿತ್ಯವೂ ಇದೇ ಗೋಳಾಗಿದೆ ಯಾರೂ ಸಹ ಸೂಕ್ತ ಕ್ರಮವನ್ನು ಜರುಗಿಸದೇ ನಮಗೆ ತೊಂದರೆಯಾಗುತ್ತಿದೆ