ರಸ್ತೆ ಕಾಮಗಾರಿ ವಿಳಂಬವಾಗ್ತಿದ್ದು, ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಾರಗಾನಕುಂಟೆಯಲ್ಲಿ ರಸ್ತೆ ಕಾಮಗಾರಿ ಆರಂಭಿಸಿ ಹಲವಾರು ತಿಂಗಳುಗಳೇ ಕಳೆದರೂ ಸಹ ಕಾಮಗಾರಿ ಪೂರ್ಣಗೊಳಿಸಿಲ್ಲ. ಇದ್ರಿಂದಾಗಿ ಈ ಮಾರ್ಗವಾಗ ಬಸ್ ಸಂಚಾರ ಬಂದ್ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಳ್ಳದೆ ಈ ರಸ್ತೆಯ ಮಾರ್ಗದಲ್ಲಿ ಯಾವುದೇ ಬಸ್ ಸಂಚಾರ ಆರಂಭಿಸುವುದಿಲ್ಲ. ವಿದ್ಯಾರ್ಥಿಗಳು ಶಾಲೆಗೆ ತೆರಳಲು 8ರಿಂದ 10ಕಿಲೋಮೀಟರ್ ಕಾಲ್ನಡಿಗೆಯಲ್ಲೇ ಕ್ರಮಿಸಿ ತೆರಳಬೇಕಾಗಿದೆ. ಅಧಿಕಾರಿಗಳು ಮತ್ತು ಸಂಬಂಧಪಟ್ಟವರಿಗೆ