ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಉಚಿತ ಅಥವಾ ರಿಯಾಯಿತಿ ದರದ ಪಾಸ್ ಗಳನ್ನು ಆನ್ ಲೈನ್ ಮುಖಾಂತರ ನೀಡುತ್ತಿದ್ದು, ಮುಂದಿನ ತಿಂಗಳು 15 ರೊಳಗೆ ಅರ್ಜಿ ಸಲ್ಲಿಸಲು ಕೋರಿದೆ. ಅಲ್ಲಿಯವರೆಗೆ ಹಳೆಯ ಪಾಸ್ ಅಥವಾ ಶಾಲಾ ಕಾಲೇಜಿನ ಗುರುತಿನ ಚೀಟಿ ಬಳಸಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಂಸ್ಥೆ ತಿಳಿಸಿದೆ.