ಹುಡುಗಿಯೊಬ್ಬಳ ಪ್ರೀತಿಸುವ ವಿಚಾರದಲ್ಲಿ ಉಂಟಾದ ದ್ವೇಷದಿಂದ ಸಹಪಾಠಿಯನ್ನು ಪಿಯುಸಿ ವಿದ್ಯಾರ್ಥಿಯೊಬ್ಬ ಹಾಡುಹಗಲೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯ ಸೌಂದರ್ಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸೌಂದರ್ಯ ಕಾಲೇಜಿನ ಶೌಚಾಲಯದಲ್ಲಿ ಬೆಳಿಗ್ಗೆ 8.30ರ ವೇಳೆ ನಡೆದ ಕೊಲೆಯಿಂದ ಕಾಲೇಜು ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ.ಸೌಂದರ್ಯ ಕಾಲೇಜಿನಲ್ಲಿ 2ನೇ ವರ್ಷದ ಪಿಯುಸಿ (ವಾಣಿಜ್ಯ) ಓದುತ್ತಿದ್ದ ದಯಾಸಾಗರ್ (18)