ನಾಡಿನ ಹಿರಿಯ ರಂಗಭೂಮಿ ಕಲಾವಿದೆ, ಖ್ಯಾತ ಗಾಯಕಿ ಸುಭದ್ರಮ್ಮ ಮನ್ಸೂರ್ ತಡರಾತ್ರಿ ತಮ್ಮ ರಂಗಪಯಣ ಮುಗಿಸಿ ಜೀವನದ ನಾಟಕಕ್ಕೆ ತೆರೆ ಎಳೆದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಬಳ್ಳಾರಿ ನಗರದ ರೇಡಿಯೋಪಾರ್ಕ್ ಪ್ರದೇಶದ ಮನೆಯಲ್ಲಿ ವಾಸವಾಗಿದ್ದ ಅವರು 11 ಗಂಟೆ ಸುಮಾರಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಕೂಡಲೆ ಪರಿಚಯದವರೂ ಬಂದು ಅವರನ್ನು ಇಲ್ಲಿನ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದರು. ಅವರಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಅವರ