ಪ್ರೀತಿ ಫಲಿಸದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಜೆಎಸ್ ನಗರದಲ್ಲಿ ನಡೆದಿದೆ. ನವೀನ ಮೂಲತಃ ಕೊಳ್ಳೆಗಾಲದ ಯುವಕನಾಗಿದ್ದು, ಬೆಂಗಳೂರಿನಲ್ಲಿ ಬಾಳೆಮಂಡಿ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪ್ರೀತಿಸ್ತಿದ್ದ ಯುವತಿ ಪ್ರೇಮ ನಿರಾಕರಣೆ ಮಾಡಿದ ಹಿನ್ನೆಲೆ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿಯತಮೆ ಹೆಸರನ್ನು ಡೆತ್ನೋಟ್ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನ ಘಟನೆ ಹಿನ್ನೆಲೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.