flexb manufacturingಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶ್ಚಿಮ ವಲಯ ವ್ಯಾಪ್ತಿಯ ಗಾಂಧಿನಗರ ವಾರ್ಡ್ ಸಂ.94 ರ ವಾಪ್ತಿಯ ಶೇಷಾದ್ರಿಪುರ ಪೊಲೀಸ್ ಠಾಣೆಯ ಸುತ್ತಮುತ್ತಲಿನ ಪ್ರದೇಶದಲ್ಲಿರುವ 3 ಫ್ಲೆಕ್ಸ್/ಬ್ಯಾನರ್ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ 12 ಪ್ಲಾಸ್ಟಿಕ್ ರೋಲ್ ಗಳನ್ನು ಜಪ್ತಿ ಮಾಡಲಾಗಿದೆ. ನಗರದ ಸಾರ್ವಜನಿಕರ ಸ್ಥಳಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್, ಪೋಸ್ಟರ್ಸ್ ಹಾಕುವುದನ್ನು ನಿಷೇಧಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರುವುಗೊಳಿಸಲಾಗುತ್ತಿದೆ.