ಬೆಂಗಳೂರು : ನಟ ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಬಂದರೆ ಲಾಭ ಆಗುತ್ತೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುದೀಪ್ ಪಕ್ಷಕ್ಕೆ ಬರ್ತಾರೆ ಅನ್ನೋದು ಗೊತ್ತಿಲ್ಲ. ನಾನೂ ಮಾಧ್ಯಮಗಳಲ್ಲಿ ನೋಡಿದ್ದು, ಇದನ್ನು ತಿಳಿದುಕೊಂಡು ಮಾತಾಡ್ತೇನೆ. ಸುದೀಪ್ ಬಂದ್ರೆ ಪಕ್ಷಕ್ಕೆ ಲಾಭ ಆಗುತ್ತೆ. ಸುದೀಪ್ ಪಕ್ಷಕ್ಕೆ ಬಂದ್ರೆ ಸ್ವಾಗತಿಸುತ್ತೇನೆ ಎಂದರು. ಕಿಚ್ಚ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನುವ ವಿಚಾರ ರಾಜಕೀಯದ ಪಡಸಾಲೆಯಲ್ಲಿ ಗಿರಕಿ ಹೊಡೆಯುತ್ತಿದೆ. ಇಂದು