ಮೈಸೂರು : ಕಿಚ್ಚ ಸುದೀಪ್ ಅವರ ಕಿಚ್ಚು ಕಾಂಗ್ರೆಸ್ ಕಚೇರಿಯನ್ನೇ ಸುಟ್ಟು ಹಾಕ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಭಾನುವಾರ ನಂಜನಗೂಡಿನಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪರವಾಗಿ ಪ್ರಚಾರಕ್ಕೆ ಇಳಿಯುವ ಮೂಲಕ ಕನ್ನಡ ಚಿತ್ರರಂಗದ ಜನಪ್ರಿಯ ನಟ ಸುದೀಪ್ ಅವರು ಕಾಂಗ್ರೆಸ್ ಕಚೇರಿಗೆ ಕಿಚ್ಚು ಹಚ್ಚಿದ್ದಾರೆ.ಕಿಚ್ಚ ಸುದೀಪ್ ಅವರ ಕಿಚ್ಚು ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಕಚೇರಿಯನ್ನು ಸುಟ್ಟು ಹಾಕುತ್ತಿದೆ. ಹೀಗಾಗಿ