ಬಿಜೆಪಿ ಪರ ನಟ ಸುದೀಪ್ ಪುಚಾರ ಮಾಡುವುದಾಗಿ ಘೋಷಣೆ ಮಾಡಿರುವುದನ್ನು ಲೇವಡಿ ಮಾಡಿರುವ ಕಾಂಗ್ರೆಸ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಕಾಂಗ್ರೆಸ್ನವರಿಗೆ ತಲೆಕೆಟ್ಟು ಏನು ಬೇಕಾದ್ರೂ ಮಾತಾಡ್ತಾರೆ. ಚಲನಚಿತ್ರದಲ್ಲಿ ಖ್ಯಾತಿ ಪಡೆದಿರುವ ವ್ಯಕ್ತಿ ಬಿಜೆಪಿಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ. ನಾವು ಅದನ್ನು ಸ್ವಾಗತ ಮಾಡುತ್ತೇವೆ. ಬಿಜೆಪಿಯವರಿಗೆ ಸಿಕ್ಕಿರುವ ಬೆಂಬಲವನ್ನು ಕಾಂಗ್ರೆಸ್ನವರಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದರು. ಇದೇ ಸಂದರ್ಭದಲ್ಲಿ