ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ದಂಪತಿ ಮತದಾನ ಮಾಡಿದರು. ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಬೇಕಾದರೇ ಮತದಾನ ಮಾಡಲೇಬೇಕು.