ಕೊವಿಡ್ ಸಂದರ್ಭದಲ್ಲಿ ನಿಧನರಾಗಿರುವ ನೇಕಾರರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಕೊಟ್ಟಿದ್ದೇವೆ ಅಂತಾ ಬೆಳಗಾವಿಯಲ್ಲಿ ಕೈಮಗ್ಗ ಹಾಗೂ ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳೆ ಪ್ರಶ್ನೆಗೆ ಉತ್ತರಿಸಿದ ಮುನೇನಕೊಪ್ಪ, ಈ ಅಧಿವೇಶನ ಮುಗಿದ ತಕ್ಷಣ ಬೆಂಗಳೂರಿನಲ್ಲಿರುವ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯವನ್ನು ಬೆಳಗಾವಿಗೆ ಸ್ಥಳಾಂತರಿಸುತ್ತೇವೆ. ಬೆಳಗಾವಿ ಸುವರ್ಣಸೌಧಕ್ಕೆ ಕಚೇರಿ ಸ್ಥಳಾಂತರ ಮಾಡುತ್ತೇವೆ. ಉಳಿದಂತೆ ದಕ್ಷಿಣ ಕರ್ನಾಟಕ