ಬೆಂಗಳೂರು : ಮಾಣಿಕ್ ಶಾ ಪೆರೇಡ್ ಗ್ರೌಂಡಿನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭದ್ರತಾ ಉಲ್ಲಂಘನೆಯ ಆರೋಪಿ ಪರಶುರಾಮ ಕುರಿತು ಇನ್ನಷ್ಟು ಮಾಹಿತಿಗಳು ಹೊರಬಿದ್ದಿವೆ. ಈತ ಈ ಮುನ್ನವೇ ಒಂದು ಬಾರಿ ಸಿಎಂ ಸಿದ್ದರಾಮಯ್ಯ ಎದುರು ಆತ್ಮಹತ್ಯೆಗೆ ಯತ್ನಿಸಿದ್ದಷ್ಟೇ ಅಲ್ಲದೇ, ಕಂಠೀರವ ಕ್ರೀಡಾಂಗಣದಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ಪಟಾಕಿ ಸಿಡಿಸಿ ಅವಾಂತರ ಸೃಷ್ಟಿಸಿದ್ದರು ಎಂದು ತಿಳಿದುಬಂದಿದೆ. ಅಂದು ಕೆಪಿಎಸ್ಸಿ ಪರೀಕ್ಷೆಯ ಫಲಿತಾಂಶವನ್ನು ಸರ್ಕಾರ ತಡೆಹಿಡಿದಿತ್ತು. ಹೀಗಾಗಿ ಪರಶುರಾಮ್ ಭವಿಷ್ಯ ಡೋಲಾಯಮಾನವಾಗಿತ್ತು.