ಸುಮಾರು 25 ಲಕ್ಷ ರೂಪಾಯಿ ಸಾಲವನ್ನು ಮಾಡಿ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿದ್ದು, ನಂತರ ಸಾಲ ತೀರಿಸಲಾಗದೇ ಇಡೀ ಕುಟುಂಬ ಸಮೇತರಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ಸಾಲ ಬಾಧೆಯನ್ನು ತಾಳಲಾರದೇ ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯಿಂದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ತಂದೆ ಹನುಮಂತಗೌಡ ಪಾಟೀಲ, ತಾಯಿ ಲಲಿತಾ ಪಾಟೀಲ ಮತ್ತು