ಮಂಡ್ಯ: ಸ್ವಕ್ಷೇತ್ರದಲ್ಲಿ ಮನೆ ಮಾಡುವುದಾಗಿ ಕ್ಷೇತ್ರದ ಜನರಿಗೆ ಕೊಟ್ಟ ಭರವಸೆಯಂತೇ ನಟಿ, ಸಂಸದೆ ಸುಮಲತಾ ಅಂಬರೀಶ್ ಇಂದು ಪೂಜೆ ನೆರವೇರಿಸಿದ್ದಾರೆ. ಹನಕೆರೆ ಗ್ರಾಮದಲ್ಲಿ ಸುಮಲತಾ ಇಂದು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಶಾಸ್ತ್ರೋಸ್ತ್ರಕ್ತವಾಗಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿದೆ.ಈ ವೇಳೆ ಸುಮಲತಾ ಅಂಬರೀಶ್ ಜೊತೆಗೆ ಅವರ ಅಭಿಮಾನಿಗಳು, ಬೆಂಬಲಿಗರು ಭಾಗಿಯಾಗಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮಂಡ್ಯ ಪ್ರವಾಸದಲ್ಲಿರುವ ಸುಮಲತಾ ಈ ಬಾರಿ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಕೆಲಸಕ್ಕೆ ಮುಂದಾಗಿದ್ದಾರೆ.