ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾದ ಬಳಿಕ ಸೀಲ್ ಡೌನ್ ಮಾಡಲಾದ ಪ್ರದೇಶದಲ್ಲಿ ಸಂಸದೆ ಸುಮಲತಾ ಅಂಬರೀಶ್ ಕಾಣಿಸಿಕೊಂಡಿದ್ದಾರೆ. ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಎರಡು ಕರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿ ಸೀಲ್ ಡೌನ್ ಆಗಿರುವ ಜಾಗಿನಕೆರೆ ಗ್ರಾಮಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಆತ್ಮವಿಶ್ವಾಸದಿಂದ ಕೊರೊನಾ ಎದುರಿಸಿ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕಿ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡೋಣ