ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ಮಾಡಿದ್ದ ನಟಿ, ಸಂಸದೆ ಸುಮಲತಾ ಅಂಬರೀಶ್, ಆ ಚುನಾವಣೆಯ ಫಲಿತಾಂಶವನ್ನು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಣೆ ಮಾಡಿದ್ದಾರೆ. ಜೊತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪುಟಿದೇಳುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ವಿರುದ್ಧ ಮಾತನಾಡುವವರಿಗೂ ಅವರು ಬಿಸಿ ಮುಟ್ಟಿಸಿದ್ದಾರೆ. ಸುಮಲತಾ ಅಂಬರೀಶ್ ತಮ್ಮ ಫೇಸ್ ಬುಕ್ ನಲ್ಲಿ ಬರೆದದ್ದು ಹೀಗಿದೆ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್