ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ JDS ಶಾಸಕ ರವೀಂದ್ರ ಶ್ರೀಕಂಠಯ್ಯ, ತಮ್ಮ ಚುನಾವಣಾ ಪ್ರಚಾರ ಭಾಷಣ ಮಾಡುವಾಗ ತಮ್ಮ ಎದುರಾಳಿಗಳ ವಿರುದ್ಧ ಹರಿಹಾಯ್ದಿದ್ದಾರೆ.. JDS ಬಿಟ್ಟು BJP ಸೇರಿದ ಸಚಿವ K.C ನಾರಾಯಣ ಗೌಡ ಮತ್ತು ಪಕ್ಷೇತರ ಶಾಸಕಿಯಾಗಿ ಲೋಕಸಭೆಗೆ ಆಯ್ಕೆಯಾಗಿ ಈಗ ಬಿಜೆಪಿಯನ್ನು ಬೆಂಬಲಿಸುತ್ತಿರುವ ಸುಮಲತಾ ಅಂಬರೀಷ್ ವಿರುದ್ಧ ವಾಗ್ದಾಳಿ ನಡೆಸಿದರು. ಕೆ.ನೆಟ್ಟಹಳ್ಳಿ ಹೋಬಳಿಯಲ್ಲಿ ಮಾತಾಡಿದ ಶ್ರೀಕಂಠಯ್ಯ, JDS ಭದ್ರಕೋಟೆಯನ್ನು ಬೇಧಿಸುತ್ತೇನೆ, ಹಾಗೆ ಮಾಡುತ್ತೇನೆ, ಹೀಗೆ ಮಾಡುತ್ತೇನೆ