ಕಳೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಏಳು ವಿಧಾನಸಭಾ ಕ್ಷೇತ್ರಗಳು ಮತ್ತು ಪ್ರಮುಖ ಸ್ಥಳೀಯ ಸಂಸ್ಥೆಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ಪ್ರಬಲ ಜೆಡಿಎಸ್ ಸೋಲಿಸಿ ಸುಮಲತಾ ಅಂಬರೀಶ್ ಏಕಾಂಗಿಯಾಗಿ ಹೋರಾಡಿ ಮಂಡ್ಯ ಸಂಸದರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು, ಆದರೆ ಅವರ ತಂತ್ರಗಾರಿಕೆ ವಿಧಾನಸಭೆ ಚುನಾವಣೆಯಲ್ಲಿ ನಡೆಯಲಿಲ್ಲ ಎಂದು ಅವರ ಬಗ್ಗೆ ಟೀಕೆಗಳು ಕೇಳಿ ಬಂದಿದ್ದವು. ಈ ಬಾರಿ ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಬೆಂಬಲಿಸಿದ್ದರು. ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು.