ಬೆಂಗಳೂರು: ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಾಗಿ ಪ್ರಸಿದ್ಧರಾಗಿದ್ದ ಡಾ. ಸುಮತೀಂದ್ರ ನಾಡಿಗ (83) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾಡಿಗ ಅವರು ಪತ್ನಿ, ಇಬ್ಬರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಕುಟುಂಬಸ್ಥರು ನಗರದ ಸಾರಕ್ಕಿ ಸಿಗ್ನಲ್ ಬಳಿ ಇರುವ ಸುಮತೀಂದ್ರ ನಾಡಿಗ ಸಮುದಾಯ