ಬೆಳಗಾವಿಯಲ್ಲಿ ಕರ್ನಾಟಕ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನವು ಸುಸೂತ್ರವಾಗಿ ನಡೆಯಬೇಕು. ಇದು ಚುನಾವಣೆ ವರ್ಷವಾಗಿರುವ ಕಾರಣ ಕಿಡಗೇಡಿಗಳು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಅಲೋಕ್ ಕುಮಾರ್ ತಿಳಿಸಿದ್ರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರು. ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವ ಯಾವುದೇ ಚಟುವಟಿಕೆಗೆ ನಾವು