ಬೆಂಗಳೂರು : ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಬೆಂಬಲ ನೀಡಿದ್ದಾರೆ ಎಂಬ ಆರೋಪಕ್ಕೆ ಇದೀಗ ಎನ್. ಚಲುವರಾಯಸ್ವಾಮಿ ಖಡಕ್ ಉತ್ತರ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ನಾನು ಸುಮಲತಾ ಅವರಿಗೆ ಬೆಂಬಲ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. ಯಾರು ಹೇಳಿದ್ದಾರೆಯೋ ಅವರೇ ಅದನ್ನು ಸಾಬೀತು ಮಾಡಲಿ ಎಂದು ಹೇಳಿದ್ದಾರೆ. ಹಾಗೇ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದ ಬಳಿಕ