ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಉದ್ದಿನಕಾಳು ಖರೀದಿಗಾಗಿ 2018-19ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 15 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಎಕರೆಗೆ 3 ಕ್ವಿಂಟಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 6 ಕ್ವಿಂಟಲ್ ಖರೀದಿ ಪ್ರಮಾಣವನ್ನು ನಿಗದಿಪಡಿಸಲಾಗಿದೆ. ಉದ್ದಿನಕಾಳು ಪ್ರತಿ ಕ್ವಿಂಟಲ್ಗೆ ರೂ.5600 ದರದಂತೆ ತಮ್ಮ ಗ್ರಾಮದ ಹತ್ತಿರದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದು ಕಲಬುರಗಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ