Widgets Magazine

ಸುಪ್ರೀಂನಿಂದ ರಾಜ್ಯಕ್ಕೆ ಡಬಲ್ ಶಾಕ್: 6 ದಿನಗಳ ಕಾಲ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ

ನವದೆಹಲಿ| Vinod| Last Updated: ಶುಕ್ರವಾರ, 30 ಸೆಪ್ಟಂಬರ್ 2016 (15:23 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಸುಪ್ರೀಂಕೋರ್ಟ್ ಡಬಲ್ ಶಾಕ್ ನೀಡಿದ್ದು, ಕಾವೇರಿ ನದಿಯಿಂದ ತಮಿಳುನಾಡಿಗೆ ಅಕ್ಟೋಬರ್ 1 ರಿಂದ 6 ರವರೆಗೂ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಹಾಗೂ ಕೇವಲ ನಾಲ್ಕು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. 
ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪಾಲನೆ ಮಾಡದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದಿಂದ ನ್ಯಾಯಾಲಯದ ಗೌರವಕ್ಕೆ ಧಕ್ಕೆಯಾಗಿದೆ. ಈ ಸಾರಿ ನ್ಯಾಯಾಲಯದ ಆದೇಶವನ್ನು ಪಾಲಿಸಲೇಬೇಕು ಎಂದು ಕೋರ್ಟ್ ಖಡಕ್ ಸಂದೇಶ ರವಾನಿಸಿದೆ. 
 
ನಾಲ್ಕು ದಿನದೊಳಗಾಗಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ಸಾಧ್ಯವೇ ಎಂದು ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್‌ ಪ್ರಶ್ನಿಸಿದೆ. 
 
ಆದರೆ, ಕೇವಲ ಮೂರು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುತ್ತೇವೆ ಎಂದು ಕೇಂದ್ರ ಸರಕಾರದ ಪರವಾಗಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಉತ್ತರಿಸಿದ್ದಾರೆ. ಹೀಗಾಗಿ ಅಕ್ಟೋಬರ್ 6 ರಂದು ವಿಚಾರಣೆ ಮುಂದೂಡಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ ಇದರಲ್ಲಿ ಇನ್ನಷ್ಟು ಓದಿ :