ತುಮಕೂರು : ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರ ಅವರ ಬೆಂಬಲಿಗರನ್ನು ನಿಯಂತ್ರಿಸುವ ಕೆಲಸಕ್ಕೆ ಬಿಜೆಪಿ ವರಿಷ್ಠರು ಮುಂದಾಗಿದ್ದು, ಅದಕ್ಕೆ ಜಿಲ್ಲೆಯಿಂದಲೇ ಆರಂಭ ಸಿಕ್ಕಿದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಿ. ಸುರೇಶ್ಗೌಡ ರಾಜೀನಾಮೆ ಸಲ್ಲಿಸಿದ್ದು, ಈ ಪ್ರಯತ್ನ ಇತರೆಡೆಗಳಿಗೂ ಕಾಲಿಡಲಿದೆ. ಯಡಿಯೂರಪ್ಪ ಅವರನ್ನು ಬದಲಿಸಿದ ನಂತರ ಅವರ ಬೆಂಬಲಿಗರನ್ನು ನಿಧಾನವಾಗಿ ಕೆಳಗಿಳಿಸುವ ಮೂಲಕ ಅವರ ಶಕ್ತಿಯನ್ನು ಕುಂದಿಸಿ, ಪಕ್ಷವನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಕೆಲಸ ನಡೆದಿದೆ