ಬೆಂಗಳೂರು: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.