ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು, ಇಂದು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖುದ್ದು ಭೇಟಿ ಮಾಡಿ ಪರಿಶೀಲನೆ ನಡೆಸಲಿದ್ದಾರೆ.