ಸೌದಿ ಅರೇಬಿಯಾ ಪ್ರವಾಸ ಮುಗಿಸಿಕೊಂಡು ಹಿಂದಿರುಗಿದ ಮತ್ತು ವಯೋಸಹಜದಿಂದ ಶ್ವಾಸಕೋಶದ ತೊಂದರೆ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವುದಕ್ಕೆ ಸರಕಾರ ಸ್ಪಷ್ಟನೆ ನೀಡಿದೆ. ಕಲಬುರಗಿ ನಗರದ ಮಹ್ಮದ್ ಹುಸೇನ್ ಸಿದ್ದಿಕಿ (ವಯಸ್ಸು 76) ಅವರು ಮಾರ್ಚ್ 10 ರಂದು ನಿಧನರಾಗಿದ್ದು, ಕರೋನಾ ವೈರಸ್ನಿಂದ ನಿಧನವಾಗಿದ್ದಾರೆ ಎಂಬುದಕ್ಕೆ ವೈದ್ಯಕೀಯ ವರದಿ ಇನ್ನೂ ದೃಢೀಕರಿಸಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಸ್ಪಷ್ಟನೆ ನೀಡಿದ್ದಾರೆ.ಮಹ್ಮದ್ ಹುಸೇನ್ ಸಿದ್ದಿಕಿ ಅವರು ಮಾರ್ಚ್ 9 ರಂದು