ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ನಗರ ಅಪರಾಧ ದಳ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.. ನಿನ್ನೆ ರಾತ್ರಿ 7 ಗಂಟೆ ವೇಳೆಯಲ್ಲಿ ಶಂಕಿತ ಉಗ್ರ ವಾಸವಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದರು. ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಕಟ್ಟಡವೊಂದರ ಮೂರನೇ ಮಹಡಿಯಲ್ಲಿದ್ದ ಕೋಣೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ಶಂಕಿತ ಉಗ್ರನೂ ವಾಸ್ತವ್ಯ ಹೂಡಿದ್ದ.